ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಬಿರುವೆರ್ ಕುಡ್ಲದಿಂದ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಕುದ್ರೋಳಿ: ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಮಂಗಳೂರು ನಗರಕ್ಕೆ ಉಚಿತವಾಗಿ ಆಂಬುಲೆನ್ಸ್ ಸೇವೆ ಆರಂಭವಾಗಲಿದ್ದು , ಆಕ್ಸಿಜನ್ ಸಹಿತ ಅತ್ಯಾಧುನಿಕ ಸೌಲಭ್ಯ ಇರುವ ಆಂಬುಲೆನ್ಸ್ ನ್ನು ಮಂಗಳವಾರ ಸಂಸದರಾದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು  ಬ್ರಹ್ನಶ್ರೀ ನಾರಾಯಣಗುರುಗಳ ತತ್ವಾದರ್ಶದಂತೆ ಬಿರುವೆರ್ ಕುಡ್ಲ ಸಂಘಟನೆ ಬಡವರಿಗೆ ನೆರವು ನೀಡುತ್ತಾ ಬರುತ್ತಿದ್ದು ಇದೀಗ  ಕೊರೊನಾ ಸಂದರ್ಭ ಸರಕಾರದ ಜತೆ ಕೈ ಜೋಡಿಸಿ ಉಚಿತ ಆಂಬುಲೆನ್ಸ್ ಸೇವೆ ನೀಡಿರುವುದು ಶ್ಲಾಘನೀಯ ಎಂದರು.

ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಬಿರುವೆರ್ ಕುಡ್ಲದ ಜನಪರ ಕೆಲಸ ಕಾರ್ಯ ವನ್ನು ಶ್ಲಾಘಿಸಿ, ಸಂಸ್ಥೆಯ ಸೇವಾ ಕಾರ್ಯ ಮುಂದುವರಿಯಲಿ ಎಂದು ಹಾರೈಸಿದರು ಶಾಸಕರಾದ ಡಿ ವೇದವ್ಯಾಸ ಕಾಮತ್ ಶುಭ ಹಾರೈಸಿದರು.

ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್,ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಸಾಯೀರಾಂ, ನಮ್ಮಟಿವಿಯ ಆಡಳಿತ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ , ಕೆ.ಟಿ.ಸುವರ್ಣ, ಜಗದೀಪ್ ಸುವರ್ಣ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್ ಬಾಗ್ ಹಾಗೂ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ (ರಿ) ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು