ಬೆಂಗಳೂರು: ಹಲವು ದಿನಗಳಿಂದ ಸುದ್ದಿಯಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಬಹಿರಂಗ ಕಿತ್ತಾಟಕ್ಕೆ ಬ್ರೇಕ್ ಬಿದ್ದಿದೆ. ಇವರಿಬ್ಬರನ್ನು ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಐಎಎಸ್ ಅಧಿಕಾರಿಗಳ ಜಟಾಪಟಿಗೆ ರಾಜ್ಯ ಸರ್ಕಾರವೇ ತೆರೆ ಎಳೆದಿದೆ.
ಈವರೆಗೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಹುದ್ದೆಗೆ ನೇಮಕ ಮಾಡಲಾಗಿದೆ. ಹಾಗೂ ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ನೂತನ ಮೈಸೂರು ಜಿಲ್ಲಾಧಿಕಾರಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕ:
ಮೈಸೂರು ಜಿಲ್ಲಾಧಿಕಾರಿಯ ಸ್ಥಾನಕ್ಕೆ ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಬಗಾದಿ ಗೌತಮ್ ಅವರನ್ನು ನೇಮಿಸಲಾಗಿದೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق