ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ನಟ ಚೇತನ್ ಕ್ಷಮೆಯಾಚನೆಗೆ ಹವ್ಯಕ ಮಹಾಸಭೆ ಆಗ್ರಹ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Adಬೆಂಗಳೂರು: ಚಲನಚಿತ್ರ ನಟ ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮಾಜದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು, ಬ್ರಾಹ್ಮಣ ಸಮಾಜವನ್ನು ಭಯೋತ್ಪಾದಕರ ಜೊತೆ ಹೋಲಿಕೆ ಮಾಡಿ ಮಾತನಾಡಿರುತ್ತಾರೆ. ಇದು ನಾಡಿನಲ್ಲಿ ಅಶಾಂತಿಗೆ ಕಾರಣವಾಗಬಹುದಾಗಿದ್ದು, ಅವರ ಹೇಳಿಕೆಗಳನ್ನು ಖಂಡಿಸುತ್ತಾ; ಅವರು ತಕ್ಷಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆ ಆಗ್ರಹಿಸಿದೆ.

ಭಾರತೀಯ ಪರಂಪರೆ ಹಾಗೂ ಬ್ರಾಹ್ಮಣ ಸಮಾಜದ ಕುರಿತಾಗಿ ಚೇತನ್ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದು ಸಮಸ್ತ ಸಮಾಜಕ್ಕೆ ಬೇಸರವನ್ನುಂಟು ಮಾಡಿದೆ. ಪ್ರಚಾರಕ್ಕೋಸ್ಕರವಾಗಿ ಸಮಾಜದಲ್ಲಿ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಹೇಳಿಕೆಗಳು ಶಿಕ್ಷಾರ್ಹವಾಗಿದೆ.  

ಚೇತನ್ ಅವರು ಈ ತಕ್ಷಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಗೆ ಧಕ್ಕೆತರುವ ಹೇಳಿಕೆಗಳನ್ನು ನೀಡಬಾರದು ಎಂದು ಮಹಾಸಭೆ ಆಗ್ರಹಿಸುತ್ತದೆ. ಸರ್ಕಾರವು ಈ ಕುರಿತು ಗಮನ ಹರಿಸಬೇಕಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ್ ಸಂಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು