ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ರಾಜ್ಯದಲ್ಲಿ ಇಂದು 16,387 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



 ಬೆಂಗಳೂರು: ರಾಜ್ಯದಲ್ಲಿ ಇಂದು 16,387 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 463 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 30,017ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 4,095 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,70,742ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 307 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 21,199 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 23,12,060ಕ್ಕೆ ಏರಿಕೆಯಾಗಿದೆ. ಇನ್ನು 2,93,124 ಸಕ್ರಿಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,45,923 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 16,387 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 11.22ಕ್ಕೆ ಇಳಿದಿದೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು