ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಕೆ.ಎಸ್.ಆರ್.ಟಿ.ಸಿ. ಹೆಸರು ಕೈ ತಪ್ಪುವ ಆತಂಕ ಬೇಡ: ಲಕ್ಷ್ಮಣ್ ಸವದಿ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಅವರು ನೀಡಿರುವ ಸ್ಪಷ್ಟನೆ ಇಂತಿದೆ:

ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ.

ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ "ಕೆಎಸ್‌ಆರ್‌ಟಿಸಿ” ಎಂದು ಬಳಸುವಂತಿಲ್ಲವೆಂದು ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ  ಮಾಧ್ಯಮಗಳ ವರದಿಗಳ  ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು,  ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು.  

ಯಾಕೆಂದರೆ  ನಮ್ಮ ಸಾರಿಗೆ ಸಂಸ್ಥೆಗೆ ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶ ಇಂದಿನವರೆಗೂ  ಬಂದಿಲ್ಲ.

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿ ಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುಧ್ಧ   ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ.

ಏತನ್ಮಧ್ಯೆ,  ಸದರಿ ಮಂಡಳಿಯನ್ನು ದಿ.4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ,  ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು.

ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲೀ ಇಲ್ಲ ಎಂಬುದನ್ನು ಗಮನಿಸಬೇಕು.

ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ / ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇವೆ. ಆದ್ದರಿಂದ ಊಹಾಪೋಹದ ಯಾವುದೇ ವದಂತಿಯನ್ನು ನಂಬಿ ಆತಂಕಪಡಬೇಕಾಗಿಲ್ಲ.


Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

أحدث أقدم