ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ರಾಜ್ಯದಲ್ಲಿ ಲಾಕ್‌ಡೌನ್‌ ಮತ್ತೆ ಒಂದು ವಾರ ವಿಸ್ತರಣೆ: ನಾಳೆ ಪ್ರಕಟಣೆ ಸಂಭವ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಬೆಂಗಳೂರು: ರಾಜ್ಯದಲ್ಲಿ ಮತ್ತೆ 1 ವಾರ ಲಾಕ್‌ಡೌನ್ ವಿಸ್ತರಣೆ ಆಗಲಿದೆ. ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ಲಾಕ್‌ಡೌನ್ ವಿಸ್ತರಣೆಗೆ ಇವತ್ತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕೋವಿಡ್ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಸಹಮತ ವ್ಯಕ್ತಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆಯೇ ಹೊಸ ಮಾರ್ಗಸೂಚಿ ಹೊರಡಿಸುವ ನಿರೀಕ್ಷೆ ಇದೆ.

ಈಗಾಗಲೇ ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಶೇಕಡಾ 50ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಯಾವ ವಲಯಗಳಿಗೆ ವಿನಾಯ್ತಿ ನೀಡಲಾಗುತ್ತದೆ ಎಂಬುದು ನಾಳೆಯ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಅವರು ಮಧ್ಯಾಹ್ನ ಘೋಷಣೆ ಮಾಡಿದ್ದರು. ಇದಾದ ಬಳಿಕ ಸಂಜೆ 6 ಗಂಟೆಗೆ ನಡೆದ ಕೋವಿಡ್ ಸಂಬಂಧಿತ ಸಚಿವರ ಸಭೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಸಹಮತ ವ್ಯಕ್ತವಾಗಿದೆ. ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ಲಾಕ್‌ಡೌನ್‌ನಿಂದ ವಿನಾಯಿತಿಯನ್ನು ಕೊಡುವಂತೆ ಸಲಹೆ ನೀಡಿದರು ಎನ್ನಲಾಗಿದೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು