ಕೊಯ್ಯೂರು: ಕೊಯ್ಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂ.7 ಜೂ.14 ರ ತನಕ ಸ್ವಯಂ ಪ್ರೇರಿತವಾಗಿ ಸೀಲ್ ಡೌನ್ ಮಾಡಿದ್ದು, ಗ್ರಾಮಸ್ಥರಿಂದ ಉತ್ತಮ ಪ್ರಕ್ರಿಯೆ ವ್ಯಕ್ತವಾಗುತ್ತಿದೆ.
ಕೊಯ್ಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ತ್ವರಿತವಾಗಿ ಹರಡುತ್ತಿದ್ದು ಕಡಿವಾಣ ಹಾಕುವ ದೃಷ್ಟಿಯಿಂದ ಮುಂದಿನ ಒಂದು ವಾರದ ಅವಧಿಯಲ್ಲಿ ಕೊಯ್ಯೂರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸುಮಾರು 1 ವಾರಗಳ ಕಾಲ, ಜೂ. 7 ರಂದು ಬೆಳಿಗ್ಗೆ 6 ರಿಂದ ಜೂ.14 ರ ವರೆಗೆ ಸಂಜೆ 6 ರ ತನಕ ಸೀಲ್ ಡೌನ್ ಎಂದು ಘೋಷಿಸಿದರು. ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ.
ನೆರೆಯ ಗ್ರಾಮದ ಜನರು ಕೊಯ್ಯೂರು ಗ್ರಾಮಕ್ಕೆ ಪ್ರವೇಶ ಮಾಡದಂತೆ ಹಾಗೂ ಕೊಯ್ಯೂರು ಗ್ರಾಮಸ್ಥರು ಬೇರೆಡೆಗೆ ಹೋಗದಂತೆ ಪೋಲಿಸ್ ಬ್ಯಾರಿಕೇಡ್ ಗಳನ್ನು ರಸ್ತೆಯಲ್ಲಿ ಅಳವಡಿಸಿದ ಬಿಗಿ ಬಂದೋಬಸ್ತು ನಲ್ಲಿ ತಪಾಸಣೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ವ್ಯಾಪಾರಸ್ಥರು, ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಸಹಕರಿಸುತ್ತಿದ್ದಾರೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق