ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ವಿಭಾಗದ ಆಶ್ರಯದಲ್ಲಿ “ಪಂಪ ಮತ್ತು ಪರಿಸರ” ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಜೂನ್ 7 ರಂದು (ಸೋಮವಾರ) ಬೆಳಗ್ಗೆ 10 ಗಂಟೆಯಿಂದ ಆನ್‌ಲೈನ್ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ಮುಂಬೈ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ವಿಶ್ರಾಂತ ಅಧ್ಯಕ್ಷ ಡಾ. ತಾಳ್ತಜೆ ವಸಂತ ಕುಮಾರ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಆಶಯ ಭಾಷಣ ನೆರವೇರಿಸಲಿದ್ದಾರೆ. ವಿಜಯ ಕರ್ನಾಟಕ ದಿನಪತ್ರಿಕೆಯ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆಯವರು ಮುಖ್ಯ ಅತಿಥಿಯಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲೆ ಡಾ. ಅನಸೂಯ ರೈ ಯವರ ಗೌರವ ಉಪಸ್ಥಿತಿಯಿರಲಿದೆ.
ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ನಿರ್ದೇಶಕ ಪ್ರೊ. ನೀಲಗಿರಿ ಎಂ. ತಳವಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಬಿವಿ ವಸಂತ್ ಕುಮಾರ್ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜು ಬೆಟ್ಟಂಪಾಡಿಯ ಪ್ರಾಚಾರ್ಯ ಡಾ. ವರದರಾಜ ಚಂದ್ರಗಿರಿಯವರು ಕ್ರಮವಾಗಿ ʼಪಂಪನ ಕಾವ್ಯದಲ್ಲಿ ನಿಸರ್ಗʼ, ʼಪಂಪನ ಕಾವ್ಯದಲ್ಲಿ ರಾಷ್ಟ್ರೀಯತೆʼ ಹಾಗೂ ʼಪಂಪನ ಕಾವ್ಯದಲ್ಲಿ ಮಾನವ ಸ್ವಭಾವಗಳುʼ ಎಂಬ ವಿಷಯಗಳ ಬಗ್ಗೆ ವಿಚಾರ ಮಂಡಿಸಲಿದ್ದಾರೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕನ್ನಡ ಅಧ್ಯಯನ ಮಂಡಳಿಯ ಅಧ್ಯಕ್ಷ ಪ್ರೊ. ಸೋಮಣ್ಣ ಮುಖ್ಯ ಅತಿಥಿಯಾಗಿರಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಶೋಧನಾ ಪ್ರಬಂಧ ಮಂಡನೆಯ ಅಧ್ಯಕ್ಷತೆಯನ್ನು ಮದರಾಸು ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಡಾ. ರಂಗಸ್ವಾಮಿ ವಹಿಸಲಿದ್ದಾರೆ, ಎಂದು ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ ಕೆ ತಿಳಿಸಿದ್ದಾರೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ