ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ; ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Adಮೈಸೂರು: ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ. ಅನ್ಯ ಮಾರ್ಗವಿಲ್ಲದೆ ನಾನು ಮಾಧ್ಯಮಗಳ ಮುಂದೆ ಬಂದಿದ್ದೇನೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪಗಳನ್ನ ಹೊರಿಸಿ ಕಣ್ಣೀರು ಹಾಕುತ್ತಲೇ ತಮ್ಮ ರಾಜೀನಾಮೆ ಘೋಷಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಲಿಕೆ ವಿರುದ್ಧ ರೋಹಿಣಿ ಸಿಂಧೂರಿ ಸಮರ ಸಾರುತ್ತಿದ್ದಾರೆ. ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಅಂತಾರೆ. ಜಿಲ್ಲಾಧಿಕಾರಿಗಳು ಈ ರೀತಿ ಹೇಳುತ್ತಿದ್ದಾರೆ. ಏನೂ ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾಡಳಿತದಿಂದ‌ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‌ಆರ್ ಫಂಡ್‌ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು..? ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ..? ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ. ಅವರ ಈಗೋದಿಂದಾಗಿ ನಾವು ಮಾಡುವ ಕೆಲಸಕ್ಕೆ ಮನ್ನಣೆ ಸಿಗ್ತಿಲ್ಲ ಎಂದು ಹೇಳಿದರು.

ಪ್ರತಿ ದಿನ ನೋಟೀಸ್, ಅವಮಾನ, ಅಪಚಾರ ಮಾಡುತ್ತಿದ್ದಾರೆ. ಫೈನಲ್‌ ಆಗಿ ನನ್ನ ನೋವನ್ನ ಹೇಳಬೇಕೆಂದು ಬಂದಿದ್ದೇನೆ. ನಾನು ಐಎಎಸ್ ಅಧಿಕಾರಿಯಾಗಿ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ರಾಜೀನಾಮೆ‌ ಸಲ್ಲಿಸುತ್ತಿದ್ದೇನೆ.ಯಾವುದೇ ಜಿಲ್ಲೆಗೂ ಇಂತಹ ಜಿಲ್ಲಾಧಿಕಾರಿಗಳು ಬೇಡ. ಅವರ ದುರಂಕಾರದಿಂದ ಈ ರೀತಿ ಪರಿಸ್ಥಿತಿ ಬಂದಿದೆ ಎಂದು ಶಿಲ್ಪಾ ನಾಗ್ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಐಎಎಸ್ ಅಧಿಕಾರಿ ಹುದ್ದೆಗೂ ರಾಜೀನಾಮೆ‌ ಕೊಡುತ್ತಿದ್ದೇನೆ ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅಸಮಾಧಾನ ಹೊರಹಾಕಿದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು