ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಕಲಾವಿದರಿಗೆ ಸಹಾಯ ಧನ: ವಯೋಮಿತಿ ಇಳಿಕೆಗೆ ಸಂಸದರಿಗೆ ನಾಟಕ ಕಲಾವಿದರ ಒಕ್ಕೂಟದಿಂದ ಮನವಿ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad




ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆ ಗೊಳಿಸ ಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ.

ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು.

ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ ಅನುಭವಿಸಿದ ಕಲಾವಿದರಿಗಾಗಿ ಸರಕಾರ ಘೋಷಿಸಿರುವ ಧನಸಹಾಯ ಪಡೆಯಲು ಕನಿಷ್ಠ 35 ವರುಷಗಳ ವಯೋಮಿತಿ ಸೂಚಿಸಿತ್ತು. 35 ವರುಷ ಪೂರೈಸಿದ ಕಲಾವಿದರು ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ 35 ವರುಷಕ್ಕಿಂತ ಕಡಿಮೆ ವಯಸ್ಸಿನ ಕಲಾವಿದರಿಗೂ ಸರಕಾರ ಸಹಾಯಹಸ್ತ ನೀಡಬೇಕು.

ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶದಲ್ಲಿರುವ ಮುನ್ನೂರಕ್ಕೂ ಅಧಿಕ ತುಳು ನಾಟಕ ಕಲಾವಿದರಿಗೆ ಸರಕಾರ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಅವರಿಗೂ ಸರಕಾರದ ಧನಸಹಾಯ ಸೌಲಭ್ಯ ದೊರೆಯುವಂತಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ವಿಚಾರವನ್ನುಸದ್ಯವೇ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ, ಒಕ್ಕೂಟದ ಅಧ್ಯಕ್ಷರಾದ ಕಿಶೋರ್ ಡಿ.ಶೆಟ್ಟಿ, ಕಾರ್ಯದರ್ಶಿ ಲಕ್ಷ್ಮಣ ಕುಮಾರ್ ಮಲ್ಲೂರು, ಕೋಶಾಧಿಕಾರಿ ಮೋಹನ್ ಕೊಪ್ಪಲ, ಕ್ಷೇಮನಿಧಿ ಸಂಚಾಲಕ ಪ್ರದೀಪ್ ಆಳ್ವ ಕದ್ರಿ, ಸಲಹೆಗಾರರಾದ ತಾರನಾಥ ಶೆಟ್ಟಿ ಬೋಳಾರ, ಕದ್ರಿ ನವನೀತ್ ಶೆಟ್ಟಿ, ಪ್ರಶಾಂತ್ ಸಿ.ಕೆ ಮುಂತಾದವರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

أحدث أقدم