ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಮಸೀದಿ ಮದ್ರಸಗಳಿಗೆ ದೇವಾಲಯಗಳ ತಸ್ತಿಕ್ ಭತ್ಯೆ: ವಿಶ್ವ ಹಿಂದು ಪರಿಷದ್ ವಿರೋಧ, ನಿರ್ಧಾರ ಹಿಂಪಡೆಯಲು ಆಗ್ರಹ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆ ಎಂದು ವಿಹಿಂಪ  ಹೇಳಿದೆ.

ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದುಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು. ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್, ಜಿಲ್ಲಾ ಅಧ್ಯಕ್ಷರಾದ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂಧರ್ಭದಲ್ಲಿ ಉಪಸ್ಥಿತಿ ಇದ್ದರು.

(ಉಪಯುಕ್ತ ನ್ಯೂಸ್)

Post a Comment

أحدث أقدم