ಗಂಜಿಮಠ (ಗುರುಪುರ): ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಟಾಸ್ಕ್ ಪೋರ್ಸ್ ಸದಸ್ಯರು ತಮ್ಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಸಂಪರ್ಕ ಮಾಡಬೇಕು. ಅಲ್ಲಿ ಕೋವಿಡ್ 19 ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.
ಅವರು ಗಂಜಿಮಠ ಗ್ರಾಮ ಪಂಚಾಯತ್ ನಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಟಾಸ್ಕ್ ಫೋರ್ಸ್ ಸದಸ್ಯರಿಗೆ ತಮ್ಮ ವ್ಯಾಪ್ತಿಯಲ್ಲಿ ಯಾರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ತಿಳಿದಿರುತ್ತದೆ. ಅಂತವರಲ್ಲಿ ಜಾಗೃತಿ ಮೂಡಿಸುವ, ಚಿಕಿತ್ಸೆ ಕೊಡಿಸುವ ಕೆಲಸ ನಡೆಯಬೇಕು. ಈ ಕುರಿತು ವೈದ್ಯಕೀಯ ಅಂತಿಮ ವರ್ಷದ ವಿದ್ಯಾರ್ಥಿಗಳು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು. ಈ ಅಭಿಯಾನವನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾತ್ರವಲ್ಲ ಪಾಲಿಕೆ ವ್ಯಾಪ್ತಿಯಲ್ಲಿಯೂ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ಗುರುಪುರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶೋಹನ್ ಅತಿಕಾರಿ, ಗಂಜಿಮಠ ಪಂಚಾಯತ್ ಅಧ್ಯಕ್ಷರಾದ ನೋಣಯ್ಯ ಕೋಟ್ಯಾನ್, ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ, ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಿತ್ ರಾಜ್, ನೋಡಲ್ ಅಧಿಕಾರಿ ಕೃಷ್ಣ ಅಡ್ಯಾರ್, ಉಪ ತಹಶೀಲ್ದಾರ್ ಶಿವಪ್ರಸಾದ್, ಗ್ರಾಮ ಲೆಕ್ಕಾಧಿಕಾರಿ, ಪಂಚಾಯತ್ ಅಭವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕುಪ್ಪೆಪದವಿನಲ್ಲಿ:
ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಟಾಸ್ಕ್ ಪೋರ್ಸ್ ಸದಸ್ಯರು ತಮ್ಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಸಂಪರ್ಕ ಮಾಡಬೇಕು.ಶೀತ, ಜ್ವರ ಇದ್ದವರು ಕೋವಿಡ್ 19 ಟೆಸ್ಟ್ ಗೆ ಹೋಗದೆ ಮನೆಯಲ್ಲಿ ಇರುತ್ತಾರೆ. ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.
ಅವರು ಕುಪ್ಪೆದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಟಾಸ್ಕ್ ಫೋರ್ಸ್ ಸದಸ್ಯರಿಗೆ ತಮ್ಮ ವ್ಯಾಪ್ತಿಯಲ್ಲಿ ಯಾರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ತಿಳಿದಿರುತ್ತದೆ. ಅಂತವರಲ್ಲಿ ಜಾಗೃತಿ ಮೂಡಿಸುವ, ಚಿಕಿತ್ಸೆ ಕೊಡಿಸುವ ಕೆಲಸ ನಡೆಯಬೇಕು. ಈ ಅಭಿಯಾನವನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾತ್ರವಲ್ಲ ಪಾಲಿಕೆ ವ್ಯಾಪ್ತಿಯಲ್ಲಿಯೂ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ತಹಶೀಲ್ದಾರ್ ಗುರುಪ್ರಸಾದ್, ಗುರುಪುರ ಉಪ ತಹಶೀಲ್ದಾರ್ ಶಿವಪ್ರಸಾದ್, ಕುಪ್ಪೆಪದವು ಪಂಚಾಯತ್ ಅಧ್ಯಕ್ಷ ಡಿ ಪಿ ಹಾಮ್ಮಬ್ಬ, ಮುತ್ತೂರು ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ,ಪಂಚಾಯತ್ ಸದಸ್ಯರುಗಳು, ಪಿಡಿಓ ಗಳಾದ ಸವಿತಾ ಮಂದೊಲಿಕರ್, ಶ್ರೀಮತಿ ವಸಂತಿ. ಕಂದಾಯ ನಿರೀಕ್ಷೆಕ ನವನೀತ್ ಮಾಳವ,ಕೋವಿಡ್ ನೋಡಲ್ ಅಧಿಕಾರಿ ಡಾ. ಸುಭಾಸ್ ಶೆಟ್ಟಿ, ಬಜಪೆ ಪೊಲೀಸ್ ಠಾಣಾ ಎಸ್. ಐ. ಪೂವಪ್ಪ, ವೈದ್ಯಾಧಿಕಾರಿ ಡಾ. ಕಿರಣ್ ರಾಜ್, ಗ್ರಾಮ ಕರಣಿಕರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿ, ಸ್ಥಳೀಯ ಮುಖಂಡರುಗಳು ಜೊತೆಗಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ