ಬೆಂಗಳೂರು: ನ್ಯೆಋತ್ಯ ಮುಂಗಾರು ಮಳೆ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿರುವುದರಿಂದ, ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೊ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಾದ ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಮಂಡ್ಯ, ರಾಮನಗರ, ಮೈಸೂರು, ಕೋಲಾರದಲ್ಲಿ ಮಳೆಯಾಗಲಿದ್ದು, ಇಲ್ಲೂ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ