ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ರಾಜ್ಯದ ಅನೇಕ ಕಡೆಯಲ್ಲಿ ಯಲ್ಲೋ ಅಲರ್ಟ್ : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆಯ ನಿರ್ದೆಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಜೊತೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ ಮುಂತಾದ ಭಾಗಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯನ್ನು ಹೊಂದಿದ್ದು, ಇಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶವನ್ನು ಹೊಂದಿದ್ದು, 28 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಗುಡುಗು ಸಹಿತ ಮಳೆಯಿಂದ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಜೊತೆಗೆ ನಗರದ ಬಹುತೇಕ ಭಾಗದಲ್ಲಿ ಮಳೆ ಸುರಿದಿದೆ. 

ಈ ಭಾರಿಯು ರಾಜಧಾನಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಆದರೂ ಪಾಲಿಕೆ ಅಧಿಕಾರಿಗಳು ಮಾತ್ರ ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಿಲ್ಲ. ಪ್ರತಿ ವರ್ಷ ಬಿಬಿಎಂಪಿ ಹೂಳು ತೆಗೆಯುವ ನೂರಾರು ಕೋಟಿ ಖರ್ಚು ವೆಚ್ಚ ಮಾಡಿದರೂ ಕಾಲುವೆಗಳೂ ಮಾತ್ರ ಕ್ಲೀನ್ ಆಗಲಿಲ್ಲ. ಈ ಬಾರಿ ಮಳೆಗೆ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಹೆಚ್ಚಿದೆ. 

ಚೈತ್ರಾ ಕುಲಾಲ್, ಪಾಣೆಮಂಗಳೂರು


Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

أحدث أقدم