ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ವೃದ್ಧಾಶ್ರಮಕ್ಕೆ ರೂ.1 ಲಕ್ಷ ದೇಣಿಗೆ: ವಿಶಿಷ್ಠವಾಗಿ ಮದುವೆ ವಾರ್ಷಿಕೋತ್ಸವ ಆಚರಿಸಿದ ದಂಪತಿಗಳು ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಮಂಗಳೂರು: ಮಂಗಳೂರಿನ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿಯಾಗಿರುವ ಶ್ರೀಮತಿ ಪುಷ್ಪಾವತಿ ಮತ್ತು ಶ್ರೀಯುತ ಶ್ರೀನಿವಾಸ್ ರವರು ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವವನ್ನು ವೃದ್ಧಾಶ್ರಮಕ್ಕೆ ದೇಣಿಗೆ ನೀಡುವ ಮೂಲಕ ವಿಶಿಷ್ಠವಾಗಿ ಆಚರಿಸಿದ್ದಾರೆ.

ದಂಪತಿಗಳು ತಮ್ಮ ಮದುವೆಯ ದಿನದ ಸವಿನೆನಪಿಗಾಗಿ ತಮ್ಮ ವೈಯಕ್ತಿಕ ನೆಲೆಯಲ್ಲಿ ಶ್ರೀ ಸಭಾದ ಪುತ್ತೂರಿನ "ಶಿವಸದನ" ವೃದ್ದಶ್ರಮಕ್ಕೆ ರೂ. 1,00,000 (ಒಂದು ಲಕ್ಷ) ದೇಣಿಗೆಯನ್ನು ನೀಡಿ ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ಇವರ ಈ ಕೊಡುಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ,  ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್  ಉಪಾಧ್ಯಕ್ಷೆ ಸ್ನೇಹ ಲತಾ ದಿವಾಕರ ಇವರು ಸ್ವೀಕರಿಸಿದರು.

ಇದೇ ವೇಳೆ ದಂಪತಿಗಳು ವಿವಾಹ ವಾರ್ಷಿಕೋತ್ಸವ ದಿನವನ್ನು ಹಾರ ಬದಲಾಯಿಸಿ, ರಾಗಿ ಹಾಲುಬಾಯಿ ಕಟ್ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಕೊಡುಗೈ ದಾನಿ ಎಂದೆನಿಸಿಕೊಂಡ ಈ ದಂಪತಿಗಳು ಮಹಿಳಾ ವೇದಿಕೆ ಸದನ, ಸುರತ್ಕಲ್ ಸ್ಥಾನಿಕ ಸಂಘ, ಅವರು ಕಲಿಸಿದ ಸರಕಾರಿ ಚಿತ್ರಾಪುರ ಶಾಲೆಯ  ಮಕ್ಕಳಿಗೆ  ಹಲವಾರು ವರ್ಷಗಳಿಂದ ಉಚಿತ ನೋಟ್ ಬುಕ್ ಪುಸ್ತಕ ವಿತರಣೆ ಸೇರಿದಂತೆ ಶಾಲೆಯಲ್ಲಿ ನಡೆಯುವ  ಪ್ರತಿಯೊಂದು ಕಾರ್ಯಕ್ರಮಗಳಿಗೆ ಹತ್ತು ಹಲವು ರೀತಿಯಲ್ಲಿ ತನುಮನ ಧನ ಸಹಾಯ ನೀಡುತ್ತಾ ಬಂದಿರುತ್ತಾರೆ.

ಇವರ ಈ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವ ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ್ ಕುಮಾರ್ ಅವರು, ನಿಮ್ಮ ಸೇವಾ ಮನೋಭಾವಕ್ಕೆ ಶ್ರೀ ಸುಬ್ರಹ್ಮಣ್ಯ ಸಭಾ ಮತ್ತು ಮಹಿಳಾ ವೇದಿಕೆಯ ಅಭಿನಂದನೆಗಳು. ನಿಮಗೆ ಹಾಗೂ ನಿಮ್ಮ ಮಕ್ಕಳಿಗೆ, ಕುಟುಂಬಕ್ಕೆ ದೇವರು ಆಯುರಾರೋಗ್ಯ ಐಶ್ವರ್ಯ ಯಶಸ್ಸು ನೀಡಲಿ. ಇನ್ನೂ ಹೆಚ್ಚಿನ ಸಹಾಯ ನೀಡುವ ಶಕ್ತಿಯನ್ನು ಸುಬ್ರಹ್ಮಣ್ಯ ದೇವರು ನಿಮಗೆ ಅನುಗ್ರಹಿಸಲಿ. ದಾಂಪತ್ಯ ಜೀವನ ಸುವರ್ಣ ಮಹೋತ್ಸವದತ್ತ ಸಾಗಲಿ ಎಂದು ಹಾರೈಸಿದರು. 

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು