ಮಂಡ್ಯ: ಕಾರೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದಾಗಿ ಒಂದೇ ಕುಟುಂಬದ ಮೂವರು ಕಾರಿನಲ್ಲೇ ದಹಿಸಿ ಮೃತಪಟ್ಟ ದಾರುಣ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಬಳಿ ಕನಕಪುರ-ಮಳವಳ್ಳಿ ರಸ್ತೆಯಲ್ಲಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ವೇಳೆ ಕಾರಿನಲ್ಲಿದ್ದ ಶೇಖ್ ಫೈಸಲ್ (44), ಮೆಹಕ್ (33), ಶೇಖ್ ಆಯಿಲ್ (11) ಸಜೀವ ದಹನವಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಕಾರು ಹಲಗೂರು ಬಳಿ ಹಳ್ಳಕ್ಕೆ ಪಲ್ಟಿಯಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಿಂದ ಹೊರಬರಲಾಗದೆ ಮೂವರು ಕಾರಿನಲ್ಲೇ ಸಂಜೀವ ದಹನವಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق