ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಮುಜರಾಯಿ ಇಲಾಖೆಯ 'ಸಿ' ವರ್ಗದ ದೇವಸ್ಥಾನದ ಸಿಬ್ಬಂದಿಗೆ ತಲಾ 3 ಸಾವಿರ ರೂ ಪ್ಯಾಕೇಜ್ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಬೆಳ್ತಂಗಡಿ: ಕರ್ನಾಟಕದಲ್ಲಿ 2ನೇ ಅಲೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು, ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಈಗಾಗಲೇ ಪರಿಹಾರದ ಪ್ಯಾಕೇಜ್‍ನ್ನು ಘೋಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇದಲ್ಲದೇ ಕಠಿಣ ನಿರ್ಬಂಧಗಳ ಜಾರಿಯಿಂದ ತೊಂದರೆಗೀಡಾಗಿರುವ ಬೇರೆ ಬೇರೆ ವರ್ಗದವರಿಂದಲೂ ಕೂಡ ಹಲವಾರು ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತನದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಘೋಷಣೆ ಮಾಡಲಾಗಿದ್ದು,  ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕಾರ್ಯಾಚರಿಸುವ ಸಿಬ್ಬಂದಿಗಳಿಗೆ  ಪರಿಹಾರ ಪ್ಯಾಕೇಜ್ ಘೋಷಿಸಿದೆ.

ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕೆಲಸ ಮಾಡುವ ಅರ್ಚಕರು, ಅಡಿಗೆ ಕೆಲಸಗಾರರು ಮತ್ತು ಸಿಬ್ಬಂದಿಗಳಿಗೆ ತಲಾ 3 ಸಾವಿರ ರೂ. ಗಳನ್ನು ನೀಡಲು ನಿರ್ಧರಿಸಲಾಗಿದ್ದು,  ಈ ನಿಟ್ಟಿನಲ್ಲಿ ಬೆಳ್ತಂಗಡಿ ಶ್ರಮಿಕ ಕೇಂದ್ರದಲ್ಲಿ  ಜೂ.11ರಂದು ಅರ್ಜಿ ಸಲ್ಲಿಕೆ ಹಾಗೂ ಭರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಲಿದ್ದು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೆಂದ್ರ ಹೆಗ್ಡೆ ಕೊಕ್ರಾಡಿ ಅವರ ನೇತೃತ್ವದಲ್ಲಿ ನಡೆಯಲ್ಲಿದೆ. ಅರ್ಜಿದಾರರ ಖಾತೆಗೆ ಪರಿಹಾರ ನಿಧಿ ನೇರ ಜಮಾವಣೆ ಮಾಡಿಸುವುದಾಗಿ ಭರವಸೆ ನೀಡಿದ್ದು, ಶೀಘ್ರವಾಗಿ ಪರಿಹಾರ ಒದಗಿಸಬೇಕೆಂಬ ದೃಷ್ಥಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  

ಹಾಗಾಗಿ ಅರ್ಹ ಅರ್ಜಿದಾರರು ಜೂ.11ರಂದು ಶ್ರಮಿಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಅನ್ನು 9900569039 ಸಂಪರ್ಕಿಸಬಹುದಾಗಿದೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು