ಆಲಿಸಿ: ಭಕ್ತಿಗೀತೆ- ದಾಸರ ಪದ- ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ
ರಚನೆ: ಪುರಂದರ ದಾಸರು
ಗಾಯನ: ವಿದ್ಯಾಭೂಷಣರು
ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ ||
ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ ||
ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ್ದಾಗ
ಹಲವು ಆಭರಣಗಳು ಜಲವು ಆಗಿ ಜಾಣತನದಿ
ಸರ್ವ ಸಂಗವನು ಬಿಟ್ಟು ಸನ್ಯಾಸಿಯಾದ ಕಾಲಕ್ಕು
ಸರ್ವದಾ ತನ್ನೆದೆಯಮೇಲೇ ಬಿಡದೆ ನಿನ್ನ ಧರಿಸಿಪ್ಪಂತೆ
ಎಡಕೆ ಭೂಮಿ ಬಲಕೆ ಶ್ರೀಯು ಎದುರಲ್ಲಿ ದುರ್ಗಾದೇವಿ
ತೊಡೆಯ ಮೇಲೆ ಲಕುಮಿಯಾಗಿ ಬಿಡದೆ ಮುದ್ದಾಡಿಸುವಂತೆ
ಮಕ್ಕಳ ಪಡೆದರೆ ನಿನ್ನ ಚೊಕ್ಕತನವು ಪೋಪುದೆಂದು
ಪೊಕ್ಕುಳೊಳು ಮಕ್ಕಳು ಪಡೆದು ಕಕ್ಕುಲಾತಿ ಪಡುವಂತೆ
ಎಂದೆಂದಿಗೂ ಮರೆಯ ನಿನ್ನಾನಂದದಿ ಜನರಿಗೆಲ್ಲ
ತಂದು ತೋರೆ ಸ್ವಾಧೀನ ಪುರಂದರ ವಿಟ್ಠಲರಾಯನ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق