ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ
ಹಸಿರ ಉಟ್ಟ ಬೆಟ್ಟಗಳಲಿ
ಮೊಲೆ ಹಾಲಿನ ಹೊಳೆಯ ಇಳಿಸಿ
ಬಯಲ ಹಸಿರ ನಗಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ
ಮರಗಿಡ ಹೂ ಮುಂಗುರುಳನು
ತಂಗಾಳಿಯ ಬೆರಳೂ ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ
ಮನೆಮನೆಯಲಿ ದೀಪ ಮುಡಿಸಿ
ಹೊತ್ತು ಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ
ರಚನೆ: ರಾಷ್ಟ್ರಕವಿ ಡಾ. ಜಿ.ಎಸ್ ಶಿವರುದ್ರಪ್ಪ
ಗಾಯನ: ಕಲಾಶ್ರೀ ವಿದ್ಯಾಶಂಕರ್ ಮಂಡ್ಯ
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق