ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ... ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 ಆಲಿಸಿ: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ...


ರಚನೆ: ವರಕವಿ ದ.ರಾ. ಬೇಂದ್ರೆ

ಗಾಯಕಿ: ಎಸ್‌. ಜಾನಕಿ

55 ವರ್ಷಗಳ ಹಿಂದೆ ತೆರೆಕಂಡ ಕುಲವಧು ಚಿತ್ರಕ್ಕೆ ಅಳವಡಿಸಿದ ಹಾಡು



ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ

ಹೊಂಗೆ ಹೂವ ತೊಂಗಲಲ್ಲಿ
ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೆ
ಬೇವಿನ ಕಹಿ ಬಾಳಿನಲ್ಲಿ
ಹೂವಿನ ನಸುಗಂಪು ಸೂಸಿ
ಜೀವಕಳೆಯ ತರುತಿದೆ

ವರುಷಕೊಂದು ಹೊಸತು ಜನ್ಮ
ಹರುಷಕೊಂದು ಹೊಸತು ನೆನೆಯು
ಅಖಿಲ ಜೀವ ಜಾತಕೆ
ಒಂದೆ ಒಂದು ಜನ್ಮದಲ್ಲಿ
ಒಂದೆ ಬಾಲ್ಯ ಒಂದೆ ಹರೆಯ
ನಮಗದಷ್ಟೆ ಏತಕೋ..

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ

Post a Comment

ನವೀನ ಹಳೆಯದು