ಆಲಿಸಿ: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ...
ರಚನೆ: ವರಕವಿ ದ.ರಾ. ಬೇಂದ್ರೆ
ಗಾಯಕಿ: ಎಸ್. ಜಾನಕಿ
55 ವರ್ಷಗಳ ಹಿಂದೆ ತೆರೆಕಂಡ ಕುಲವಧು ಚಿತ್ರಕ್ಕೆ ಅಳವಡಿಸಿದ ಹಾಡು
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ
ಹೊಂಗೆ ಹೂವ ತೊಂಗಲಲ್ಲಿ
ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೆ
ಬೇವಿನ ಕಹಿ ಬಾಳಿನಲ್ಲಿ
ಹೂವಿನ ನಸುಗಂಪು ಸೂಸಿ
ಜೀವಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ
ಹರುಷಕೊಂದು ಹೊಸತು ನೆನೆಯು
ಅಖಿಲ ಜೀವ ಜಾತಕೆ
ಒಂದೆ ಒಂದು ಜನ್ಮದಲ್ಲಿ
ಒಂದೆ ಬಾಲ್ಯ ಒಂದೆ ಹರೆಯ
ನಮಗದಷ್ಟೆ ಏತಕೋ..
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق