ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಭಾವಗೀತೆ- ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Adಸಾಹಿತ್ಯ: ಕೆ ಎಸ್ ನರಸಿಂಹಸ್ವಾಮಿ

ಸಂಗೀತ: ಮೈಸೂರು ಅನಂತಸ್ವಾಮಿ

ಗಾಯಕಿ: ಸುಲೋಚನಾ

ಕೃಪೆ: ಸಂಗೀತಾ ಆಡಿಯೋ


"ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು ನಿದ್ದೆ ಬರುವಳು ಹೊದ್ದು ಮಲಗು ಮಗುವೆ ಜೋ ಜೋಜೋ ಜೋ, ಜೋ ಜೋಜೋ ಜೋ|| ಸುತ್ತಿ ಹೊರಳಾಡದಿರು, ಮತ್ತೆ ಹಠ ಹೂಡದಿರು ನಿದ್ದೆ ಬರುವಳು ಕದ್ದು ಮಲಗು ಮಗುವೆ ಜೋ ಜೋಜೋ ಜೋ, ಜೋ ಜೋಜೋ ಜೋ|| 


ಮಲಗು ಚೆಲ್ವಿನ ತೆರೆಯೆ, ಮಲಗು ಒಲ್ಮೆಯ ಸೆರೆಯೇ, ಮಲಗು ತೊಟ್ಟಿಲ ಸಿರಿಯೆ, ದೇವರಂತೆ| ಮಲಗು ಮುದ್ದಿನ ಗಿಣಿಯೆ, ಮಲಗು ಮುತ್ತಿನ ಮಣಿಯೆ, ಮಲಗು ಚಂದಿರನೂರ ಹೋಗುವೆಯಂತೆ|| ಮಲಗು ಚಂದಿರನೂರ ಹೋಗುವೆಯಂತೆ|| ಮಲಗು ಚಂದಿರನೂರ ಹೋಗುವೆಯಂತೆ||


 


ತಾರೆಗಳ ಜರತಾರಿ ಅಂಗಿ ತೊಡಿಸುವರಂತೆ ಚಂದಿರನ ತಂಗಿಯರು ನಿನ್ನ ಕರೆದು | ಹೂವ ಮುಡಿಸುವರಂತೆ, ಹಾಲ ಕುಡಿಸುವರಂತೆ, ವೀಣೆ ನುಡಿಸುವರಂತೆ, ಸುತ್ತ ನೆರೆದು|| ವೀಣೆ ನುಡಿಸುವರಂತೆ, ಸುತ್ತ ನೆರೆದು|| 


ಬಣ್ಣ ಬಣ್ಣದ ಕನಸು ಕರಗುವುದು ಬಲುಬೇಗ ಹಗಲು ಬರುವನು ಬೆಳ್ಳಿ ಮುಗಿಲ ನಡುವೆ| ಚಿನ್ನದಂಬಾರಿಯಲಿ ನಿನ್ನ ಕಳುಹುವರಾಗ.. ಪಟ್ಟದಾನೆಯ ಮೇಲೆ ಪುಟ್ಟ ಮಗುವೆ|| ಪಟ್ಟದಾನೆಯ ಮೇಲೆ ಪುಟ್ಟ ಮಗುವೆ|| 


ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು ನಿದ್ದೆ ಬರುವಳು ಹೊದ್ದು ಮಲಗು ಮಗುವೆ| ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ಜೋ ||"


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

ನವೀನ ಹಳೆಯದು